News and Events
ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ
ಎಲ್ಲಾ ಜನತೆ ಆರೋಗ್ಯವಂತರಾಗಿರಬೇಕು ಎಂಬ ಉದ್ದೇಶದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಿರ್ಮಾಣವಾದ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ನಾವು ರೋಗಿಗಳ ಸೇವೆಯನ್ನು ಶ್ರದ್ಧೆಯಿಂದ ಮಾಡಿದಾಗ ಪೂಜ್ಯರ ಆರೋಗ್ಯಯುತ ಸಮಾಜದ ಕನಸು ನನಸಾಗುತ್ತದೆ. ಈಗಾಗಲೇ ನಮ್ಮ ಆಸ್ಪತ್ರೆ ವಿಶ್ವಾಸನೀಯ ಸೇವೆಯಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು.
ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, 2023ರಲ್ಲಿ ಜನರ ಬದುಕು ಸುಖಮಯವಾಗಿರಲಿ. ಎಲ್ಲರೂ ಆರೋಗ್ಯಯುತ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.
ಆಸ್ಪತ್ರೆಯ ಸಿಬ್ಬಂದಿಗಳ ತಂಡ ಹೂವಿನ ಎಸಳುಗಳಿಂದ ರಂಗೋಲಿ ರಚಿಸಿದ್ದರು. 2023ರ ಸಂಕೇತವಾಗಿ 23 ಹಣತೆಗಳನ್ನು ಹಚ್ಚಲಾಯಿತು. ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.












