News and Events
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ: ಎಸ್ ಡಿ ಎಂ ಆಸ್ಪತ್ರೆ ವತಿಯಿಂದ ವಿಶೇಷ ಅಭಿನಂದನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.25ರಂದು ವಿಶೇಷವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರದ ಭಕ್ತಾದಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಒಟ್ಟಾಗಿ ಸೇರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿ ಅಭಿನಂದಿಸಿದರು.
ಅವರ ಸೇವೆ, ಮಾರ್ಗದರ್ಶನ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿ ಗೌರವ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದಲೂ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಆಸ್ಪತ್ರೆಯ ಎಂಡಿ ಜನಾರ್ಧನ್ ಸೇರಿದಂತೆ ವೈದ್ಯರು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ಉಪಸ್ಥಿತರಿದ್ದು, ಡಾ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಸ್ಮರಿಸಿ, ಅವರ ಆರೋಗ್ಯ, ಆಯುಷ್ಯ ಮತ್ತು ಸಮಾಜಸೇವೆಯ ನಿರಂತರತೆಗೆ ಶುಭ ಹಾರೈಸಲಾಯಿತು.























