Contact Mobile: 91 77603 97878, Land: 08256-295611/ 615/616

Medical Camps

ಆರೋಗ್ಯ ಶಿಬಿರಗಳಿಗೆ ಪೂಜ್ಯರ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಆರೋಗ್ಯ ಶಿಬಿರಗಳಿಗೆ ಭೇಟಿ ನೀಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಾಶಿವರಾತ್ರಿ ಸಂದರ್ಭದಲ್ಲಿ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಬರುತ್ತಿದ್ದು, ಇವರ ಆರೋಗ್ಯ ರಕ್ಷಣೆಗೆ ಅನುಕೂಲವಾಗುವಂತೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಪ್ರತಿ ವರ್ಷದಂತೆ ಈ ಬಾರಿಯೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆರೋಗ್ಯ ಶಿಬಿರಗಳನ್ನು ತೆರೆಯಲಾಗಿದೆ. ಚಾರ್ಮಾಡಿ, ಮುಂಡಾಜೆ, ಬೂಡುಜಾಲು, ಎಸ್.ಡಿ.ಎಂ ಆಸ್ಪತ್ರೆ, ಎಸ್.ಡಿ.ಎಂ ಡಿ.ಎಡ್ ಕಾಲೇಜು ಬಳಿ, ಹಾಗೂ ಧರ್ಮಸ್ಥಳ ಮುಂತಾದ 6 ಕಡೆಗಳಲ್ಲಿ ಆರೋಗ್ಯ ಶಿಬಿರಗಳನ್ನು ತೆರೆದು, ಅಗತ್ಯವಿರುವ ಔಷಧಿ, ಮುಲಾಮು, ಸ್ಪ್ರೇ ಬ್ಯಾಂಡೇಜ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ.
ಎಲ್ಲಾ ಶಿಬಿರಗಳಿಗೆ ಭೇಟಿ ನೀಡಿದ ಪೂಜ್ಯರು ಸಿಬಿರಗಳಲ್ಲಿ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು ಪರಿಶೀಲಿಸಿದರು ಮತ್ತು ಪಾದಯಾತ್ರಿಗಳ ಯೋಗಕ್ಷೇಮ ವಿಚಾರಿಸಿದರು.

Medical Camps

Related News

Related Events