News and Events
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ‘ಉತ್ತಮ ರೋಗಿ ನಿರ್ವಹಣೆಗಾಗಿ ಸಂವಹಣ’ ಕುರಿತು ಉಪನ್ಯಾಸ
ಉಜಿರೆಯ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳಿಗೆ ‘ಉತ್ತಮ ರೋಗಿ ನಿರ್ವಹಣೆಗಾಗಿ ಸಂವಹನ’ ಕುರಿತು ಅತಿಥಿ ಉಪನ್ಯಾಸವು ಏಪ್ರಿಲ್ .19ರಂದು ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು.
ಬೆಂಗಳೂರಿನ ಗ್ರೂಪ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನ ಬಿಸಿನೆಸ್ ಡೆವಲಪ್ ಮೆಂಟ್ ವಿಭಾಗದ ಉಪಾಧ್ಯಕ್ಷ ಡಾ.ಸುನಿಲ್ ಎಸ್. ಚಿಪ್ಳೂಣ್ಕರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪಿರಿಯೊಡಾಂಟಾಲಜಿ ವಿಭಾಗದ ಮುಖ್ಯಸ್ಥ ಡಾ.ಎಂ.ಎಂ.ದಯಾಕರ್ ವಿಶೇಷ ಅತಿಥಿಯಾಗಿದ್ದರು. ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್ ಪಿ, ಮುಖ್ಯ ವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್ ಉಪಸ್ಥಿತರಿದ್ದರು.







