News and Events
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೇಂದ್ರ ಕುಮಾರ್. ಪಿ, ಮಕ್ಕಳರೋಗ ತಜ್ಞರಾದ ಡಾ| ಪ್ರತೀತ್, ಡಾ| ಅರ್ಚನಾ, ಡಾ| ನಿಖಿತಾ ಮಿರ್ಲೆ, ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಮತ್ತು ಡಾ| ಪ್ರಿಯಾಂಕ, ಕಿವಿ-ಮೂಗು-ಗಂಟಲು ತಜ್ಞರಾದ ಡಾ| ರೋಹನ್ ದೀಕ್ಷಿತ್, ದಂತ ವೈದ್ಯರಾದ ಡಾ| ಮೀರಾ ಅನುಪಮಾ ಹಾಗೂ ಇತರ ವೈದ್ಯರು, ದಾದಿಯರು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.











