Medical Camps
ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ
ಆರ್ಥಿಕ ಅಗತ್ಯವಿರುವ ರೋಗಿಗಳಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಾರ್ಷಿಕ 1.50 ಕೋಟಿ ರೂ. ಮೊತ್ತದ ಉಚಿತ ಡಯಾಲಿಸಿಸ್ ಸೇವೆ ನೀಡುವ ಯೋಜನೆಯನ್ನು ಇಂದಿನಿಂದ (ಜ.1) ಪ್ರಾರಂಭಿಸಲಾಗಿದೆ.
ಇತ್ತೀಚೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸರ್ವಧರ್ಮ ಸಮ್ಮೇಳನದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಬಗ್ಗೆ ಘೋಷಿಸಿದ್ದರು.
ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ, ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಅವರು, “ಡಯಾಲಿಸಿಸ್ ರೋಗಿಗಳಿಗೆ ನಿರಂತರ ಆರೈಕೆ ಬೇಕಾಗಿದ್ದು, ಅವರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಖರ್ಚು ಮಾಡಬೇಕಾದ ಪರಿಸ್ಥಿತಿಯಿದೆ. ಆದರೆ ಬಡ ರೋಗಿಗಳಿಗೆ ಇದು ಸವಾಲಿನ ಸಂಗತಿಯಾಗಿದ್ದು, ಅವರ ಉಳಿತಾಯವೆಲ್ಲಾ ಡಯಾಲಿಸಿಸ್–ನಂತಹ ಚಿಕಿತ್ಸೆಗೇ ವ್ಯಯವಾಗುತ್ತದೆ. ಅದನ್ನು ತಪ್ಪಿಸುವ ಉದ್ದೇಶದಿಂದ ಡಾ. ಹೆಗ್ಗಡೆ ಅವರ ಆಶಯದಂತೆ ಈ ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಲಾಗಿದೆ” ಎಂದರು.
Medical Camps
Related News