News and Events
ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ
ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 46 ವರ್ಷ ಪ್ರಾಯದ ರೋಗಿಯೊಬ್ಬರಿಗೆ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಮಹೇಶ್ ಕೆ., ಮೂಳೆ ಶಸ್ತ್ರಚಿಕಿತ್ಸಾ ವೈದ್ಯ ಡಾ| ಶತಾನಂದ ಪ್ರಸಾದ್ ರಾವ್ ಮತ್ತು ಅರಿವಳಿಕೆ ತಜ್ಞೆ ಡಾ| ಚೈತ್ರಾ ಆರ್. ಇವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.
ಸರ್ಜರಿ ಬಳಿಕ ರೋಗಿಯಲ್ಲಿ ಕುತ್ತಿಗೆ ನೋವು ನಿವಾರಣೆಯಾಗಿದೆ ಮತ್ತು ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಸರ್ಜರಿ ನಡೆಸಿದ ಮೂಳೆ ಶಸ್ತ್ರಚಿಕಿತ್ಸಾ ಡಾ| ಶತಾನಂದ ಪ್ರಸಾದ್ ರಾವ್ ತಿಳಿಸಿದ್ದಾರೆ.
ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ ಎನ್ನುವುದು ಕುತ್ತಿಗೆಯ ಮೇಲೆ ಪರಿಣಾಮ ಬೀರುವ ವಿವಿಧ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಈ ಶಸ್ತ್ರಚಿಕಿತ್ಸಾ ವಿಧಾನದಲ್ಲಿ ಅತೀ ಸಣ್ಣ ಛೇದನದೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುವುದರಿಂದ ಅತೀ ಕಡಿಮೆ ಅಂಗಾಂಶಗಳ ಹಾನಿ, ಶೀಘ್ರ ಚೇತರಿಕೆ, ಕಡಿಮೆ ನೋವು, ಅತೀ ಕಡಿಮೆ ರಕ್ತದ ನಷ್ಟ ಇರುತ್ತದೆ ಮತ್ತು ಸೋಂಕಿನ ಅಪಾಯವೂ ಕಡಿಮೆಯಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುವುದರೊಂದಿಗೆ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು ಕೂಡ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. – ಎಂ. ಜನಾರ್ದನ್, ವ್ಯವಸ್ಥಾಪಕ ನಿರ್ದೇಶಕರು, ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆ, ಉಜಿರೆ










