Medical Camps
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ದಿನಾಂಕ ಫೆ 14 ರಿಂದ 19 ರವರೆಗೆಶಿವರಾತ್ರಿ ಪಾದಯಾತ್ರಾರ್ಥಿಗಳಿಗೆ ಉಚಿತ ವೈದ್ಯಕೀಯ ಸೇವೆ
ಶಿವರಾತ್ರಿ ಸಂದರ್ಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಿವಜಾಗರಣೆಯಲ್ಲಿ ಪಾಲ್ಗೊಂಡು ಧನ್ಯರಾಗುತ್ತಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಫೆ. 14ರಿಂದ 19 ರವರೆಗೆ ಉಚಿತ ಔಷಧಿ ಮತ್ತು ವೈದ್ಯಕೀಯ ಸೇವೆ ನೀಡಲಾಯಿತು.
ಪಾದಯಾತ್ರಿಗಳ ಆರೋಗ್ಯ ರಕ್ಷಣೆ ಮತ್ತು ಸಹಾಯಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವತಿಯಿಂದ ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಹಾಗೂ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ವಿಶೇಷ ಕೌಂಟರ್‍ಗಳನ್ನು ತೆರೆದು, ಪಾದಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಅಗತ್ಯವಿರುವ ಔಷಧಿ, ಲಸಿಕೆ, ಮುಲಾಮು, ಸ್ಪ್ರೇ, ಬ್ಯಾಂಡೇಜ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಯಿತು.
ಪ್ರತಿ ಕೌಂಟರ್‍ಗಳಲ್ಲಿ ವೈದ್ಯರು, ದಾದಿಯರು ಹಾಗೂ ಸಹಾಯಕರು ಪಾದಯಾತ್ರಿಗಳ ಆರೋಗ್ಯ ರಕ್ಷಣೆಯಲ್ಲಿ ಸಹಕರಿಸಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ 24 ಗಂಟೆಯೂ ವೈದ್ಯಕೀಯ ಸೇವೆ ನೀಡಲಾಯಿತು.
ಈ ಬಾರಿ 28,879 ಮಂದಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸೇವೆಯನ್ನು ಪೂಜ್ಯ ಹೆಗ್ಗಡೆಯವರ ನಿರ್ದೇಶನದಂತೆ ಸಂಪೂರ್ಣ ಉಚಿತವಾಗಿ ನೀಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Medical Camps
Related News