Contact Mobile: 91 77603 97878, Land: 08256-295611/ 615/616

Medical Camps

ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ

ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವು ಅ.24, 25ರಂದು ನಡೆಯಿತು. 

ಉಜಿರೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಉದ್ಘಾಟಿಸಿ ಮಾತನಾಡಿದರು.

58 ವರ್ಷಗಳ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ವೀರೇಂದ್ರ ಹೆಗ್ಗಡೆ ಅವರು, ಚತುರ್ವಿಧ ದಾನಗಳನ್ನು ದೇಶಾದ್ಯಂತ ವಿಸ್ತರಿಸಿದರು. ಜನರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ 50 ವರ್ಷಗಳ ಹಿಂದೆ ಎಸ್.ಡಿ.ಎಂ. ಮೆಡಿಕಲ್‌ ಟ್ರಸ್ಟ್ ಸ್ಥಾಪಿಸಿ ಸಂಚಾರಿ ಆಸ್ಪತ್ರೆಯ ಮೂಲಕ ಹಳ್ಳಿಯ ಜನತೆಯ ಆರೋಗ್ಯ ರಕ್ಷಣೆಗೆ ಒಂದು ನೂತನ ವ್ಯವಸ್ಥೆ ಕಲ್ಪಿಸಿದರು. ಉಜಿರೆಯಂತಹ ಗ್ರಾಮೀಣ ಭಾಗದಲ್ಲಿ ಎಸ್.ಡಿ.ಎಂ. ಆಸ್ಪತ್ರೆಯನ್ನು ನಿರ್ಮಿಸಿ ದೂರದ ದುರ್ಗಮ ದಾರಿ ಇರುವ ಮಂಗಳೂರಿಗೆ ರೋಗಿಗಳು ಅಲೆದಾಡುವ ಸಂಕಷ್ಟವನ್ನು ಪೂಜ್ಯರು ನಿವಾರಿಸಿದರು. ಅವರ ಆಶಯದಂತೆ ಅತ್ಯಾಧುನಿಕ ವೈದ್ಯಕೀಯಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸೇವೆ ನಿರಂತರ ನಡೆಯಲಿ ಎಂದು ಅವರು ಹೇಳಿದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್‌ ಮಾತನಾಡಿ, “ಸಮಾಜಪೂರಕ ಎಲ್ಲ ಕಾರ್ಯಗಳಿಗೆ ಹೆಗ್ಗಡೆ ಅವರು ನೀಡುವ ಪ್ರೋತ್ಸಾಹದಿಂದ ನಮಗೆ ಇಂತಹ ಉಚಿತ ಶಿಬಿರಗಳನ್ನು ನಡೆಸಲು ಸಾಧ್ಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮೂಳೆಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿರುವುದರಿಂದ ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ನಮ್ಮಲ್ಲಿ 5 ಮಂದಿ ಮೂಳೆ ಚಿಕಿತ್ಸಾ ತಜ್ಞರಿದ್ದು ಇಲ್ಲಿ ಮೂಳೆಗೆ ಸಂಬಂಧಿಸಿದ ಎಲ್ಲಾ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ” ಎಂದರು.

ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್‌ ಜೈನ್ ಮಾತನಾಡಿ, ಈ ಆಸ್ಪತ್ರೆಯಲ್ಲಿ ಎಲ್ಲಾ ವಿಭಾಗಗಳಲ್ಲಿ ನುರಿತ ತಜ್ಞವೈದ್ಯರಿದ್ದು, ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಕೂಡ ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದರು.

ವೈದ್ಯಕೀಯ ಅಧೀಕ್ಷಕ ಮತ್ತು ಮೂಳೆ ಚಿಕಿತ್ಸಾ ತಜ್ಞ ಡಾ| ದೇವೇಂದ್ರ ಕುಮಾರ್ ಪಿ., ಮೂಳೆ ಚಿಕಿತ್ಸಾತಜ್ಞರಾದ ಡಾ| ಪ್ರತೀಕ್ಷ್ ಪಿ.ಡಾ| ಹರೀಶ್ ಬಿ.ಎಸ್.ಡಾ| ಶತಾನಂದ ಪ್ರಸಾದ್‌ ರಾವ್ಡಾ| ರಜತ್ ಹೆಚ್.ಪಿ. ಮೂಳೆ ಸಾಂದ್ರತೆ ತಪಾಸಣೆ ಬಗ್ಗೆ ವಿವರಿಸಿದರು ಹಾಗೂ ರೋಗಿಗಳ ತಪಾಸಣೆ ನಡೆಸಿದರು.

ಡಾ. ಸತೀಶ್ಚಂದ್ರ ಎಸ್. ಅವರನ್ನು ಸನ್ಮಾನಿಸಲಾಯಿತು.

ಆಸ್ಪತ್ರೆಯ ಸ್ಟೋರ್ ಮೆನೇಜರ್‌ ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು. ಮಾರ್ಕೆಟಿಂಗ್‌ ಎಕ್ಸಿಕ್ಯೂಟಿವ್ ಸುಮಂತ್‌ ರೈ ಹಾಗೂ ಸಂಪರ್ಕಾಧಿಕಾರಿ ಚಿದಾನಂದ ಸಹಕರಿಸಿದರು.

ಶಿಬಿರದಲ್ಲಿ ಉಚಿತ ವೈದ್ಯರ ಸಮಾಲೋಚನೆ, ಉಚಿತ ಮೂಳೆ ಸಾಂದ್ರತೆ ಪರೀಕ್ಷೆ, ಉಚಿತ ಎಕ್ಸ್ರೇ, ಒಳರೋಗಿ ವಿಭಾಗದಲ್ಲಿ ಸರ್ಜರಿ ಮೇಲೆ 10% ರಿಯಾಯಿತಿ, ಹೊರರೋಗಿ ವಿಭಾಗದಲ್ಲಿ ರಕ್ತ ಪರೀಕ್ಷೆ ಮತ್ತು ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, ಔಷಧದಲ್ಲಿ 10% ರಿಯಾಯಿತಿ ನೀಡಲಾಯಿತು. 425 ಮಂದಿ ಶಿಬಿರದ ಸದುಪಯೋಗ ಪಡೆದರು.

Medical Camps

Related News

Related Events