Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್

ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೀಗ ಹೊಸ ತಂತ್ರಜ್ಞಾನ ಹೊಂದಿರುವ 29 ಲಕ್ಷ ಮೌಲ್ಯದ 2 ಬಿಪಿಎಲ್ ಎಲಿಸಾ-600 ವೆಂಟಿಲೇಟರ್‍ಗಳನ್ನು ಮಾ. 27ರಂದು ರೋಗಿಗಳ ಸೇವೆಗೆ ಅಳವಡಿಸಿ ಚಾಲನೆ ನೀಡಲಾಯಿತು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಸಲಕರಣೆಗಳೊಂದಿಗೆ ಸುಧಾರಿತ ವೈದ್ಯಕೀಯ ಸೇವೆ ನೀಡುತ್ತಿದೆ. 9 ಹಾಸಿಗೆಗಳ ಸುಸಜ್ಜಿತ ಐಸಿಯು ಹೊಂದಿರುವ ಈ ಆಸ್ಪತ್ರೆಯು ಈಗಾಗಲೇ 4 ವೆಂಟಿಲೇಟರ್‍ಗಳನ್ನು ಹೊಂದಿದೆ.

ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್‍ನಲ್ಲಿ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಸುಗಳಿಗೆ ಹೊಂದಾಣಿಕೆಯಾಗುವಂತೆ ಅಲ್ಟ್ರಾ-ಪ್ರೀಮಿಯಂ ಕ್ಲಾಸ್ ವೆಂಟಿಲೇಟರ್‍ನ್ನು ಟ್ರಾಲಿಗೆ ಅಳವಡಿಸಲಾಗಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ರೋಗಿಯ ಪರಿಸ್ಥಿತಿಯನ್ನು ಅರ್ಥಗರ್ಭಿತವಾಗಿ ಮತ್ತು ಶೀಘ್ರವಾಗಿ ಗ್ರಹಿಸುವ ತ್ವರಿತ ವೀಕ್ಷಣಾ ತಂತ್ರಜ್ಞಾನವನ್ನು ಹೊಂದಿರುವುದರಿಂದ ರೋಗಿಗೆ ಉಸಿರಾಟದಲ್ಲಿ ವ್ಯತ್ಯವಾಗದಂತೆ ನಿಗಾವಹಿಸುತ್ತದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್. ಪಿ, ಫಿಸಿಷಿಯನ್ ಡಾ. ಸಾತ್ವಿಕ್ ಜೈನ್, ಡಾ. ಯಶಸ್ವಿನಿ ಮೋಹನ್ ಅಮೀನ್, ಡಾ. ಶುೃತಿ, ಹೆಚ್ ಬಿಪಿಎಲ್ ಕಂಪೆನಿ ಎಂಜಿನಿಯರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

News and Events

Related News