News and Events
ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ರ ಹೊಸ ವರ್ಷಾಚರಣೆ
ಎಲ್ಲಾ ಜನತೆ ಆರೋಗ್ಯವಂತರಾಗಿರಬೇಕು ಎಂಬ ಒಳ್ಳೆಯ ಉದ್ದೇಶದೊಂದಿಗೆ ಪೂಜ್ಯ ಹೆಗ್ಗಡೆಯವರು ನಿರ್ಮಿಸಿದ ಈ ಆಸ್ಪತ್ರೆಯಲ್ಲಿ 2024ರಲ್ಲಿ ಲಕ್ಷಕ್ಕೂ ಅಧಿಕ ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆಗಳೊಂದಿಗೆ ಹೈಟೆಕ್ ವೈದ್ಯಕೀಯ ಸೇವೆಯನ್ನು ಗ್ರಾಮೀಣ ಜನತೆಗೆ ಮಿತದರದಲ್ಲಿ ನೀಡಿಲಾಗಿದೆ. ಇಂದಿನಿಂದ ಪೂಜ್ಯ ಹೆಗ್ಗಡೆಯವರು ಡಯಾಲಿಸಿಸ್ ಸೇವೆಯನ್ನು ಸಂಪೂರ್ಣ ಉಚಿವಾಗಿ ಮಾಡಿದ್ದು, ಇದೊಂದು ಐತಿಹಾಸಿಕ ನಿರ್ಣಯವಾಗಿದೆ. 2025 ಎಲ್ಲರಿಗೂ ಆರೋಗ್ಯವನ್ನು ಕರುಣಿಸಲಿ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ ವೇಳೆ ದೀಪ ಬೆಳಗಿಸಿ ಹೊಸ ವರ್ಷವನ್ನು ಸ್ವಾಗತಿಸಿ ಮಾತನಾಡುತ್ತಾ, 2025ರಲ್ಲಿ ಎಲ್ಲಾ ಜನರು ಆರೋಗ್ಯದಿಂದ ಸುಖಮಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳ ತಂಡ ಹೂವಿನ ಎಸಳುಗಳಿಂದ ರಂಗೋಲಿ ರಚಿಸಿದ್ದರು.