Contact Mobile: 91 77603 97878, Land: 08256-295611/ 615/616

News and Events

ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ| ದೀಪಾ ಎ.ಜಿ ಇವರು ಮಕ್ಕಳ ಆರೋಗ್ಯ ಪಾಲನೆಯ ಬಗ್ಗೆ ಮಾಹಿತಿ ನೀಡಿ, ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಸಂಗೀತ ಇವರು ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿ, ಇದೇ ರೀತಿಯ ಉಚಿತ ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ವಿವಿಧ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು. ಡಾ| ಸುಜನಾ, ಶ್ರೀಮತಿ ನಯನ, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ ಹಾಗೂ ಎಸ್.ಡಿ.ಎಂ ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷರಾದ ಶ್ರೀಧರ್ ಇವರು ಉಪಸ್ಥಿತರಿದ್ದರು. ಶಿಬಿರದಲ್ಲಿ 70 ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.
ಕೂಸಪ್ಪ ಇವರು ಸ್ವಾಗತಿಸಿ, ಜಯಭಾರತಿ ಧನ್ಯವಾದ ಅರ್ಪಿಸಿದರು. ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ವರದಿ: ನಾರಾಯಣ. ಬಿ

News and Events

Related News