Contact Mobile: 91 77603 97878, Land: 08256-295611/ 615/616

News and Events

ವೈದ್ಯರ ಸೇವೆ ಮತ್ತು ತ್ಯಾಗ ಅಮೂಲ್ಯ- ಎಂ. ಜನಾರ್ದನ್ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ಎಲ್ಲರಿಗೂ ವೈದ್ಯರ ದಿನಾಚರಣೆಯ ಶುಭಾಶಯ ತಿಳಿಸುತ್ತಾ, ಹಿರಿಯ ಅನುಭವಿ ವೈದ್ಯರೊಂದಿಗೆ ಯುವ ಮತ್ತು ಉತ್ಸಾಹಭರಿತ ವೈದ್ಯರ ತಂಡವೇ ಈ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಗೆ ಸದಾ ಸಿದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‍ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

News and Events

Related News