Medical Camps
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಮಹಿಳೆಯರ ಆರೋಗ್ಯ ತಪಾಸಣೆ ಮತ್ತು ಬಂಜೆತನ ತಪಾಸಣಾ ಶಿಬಿರ
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ವಿಶ್ವಾರ್ಹ ಮತ್ತು ಮಿತದರದ ಸೇವೆಯಿಂದಾಗಿ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಮಾತೃಶ್ರೀ ಅಮ್ಮನವರು ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಇವತ್ತಿನ ಈ ಶಿಬಿರಕ್ಕೆ ಅವರೇ ಪ್ರೇರಣೆ ನೀಡಿರುತ್ತಾರೆ ಎಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು.
ಸೆ. 23ರಂದು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಮಹಿಳೆಯರ ಉಚಿತ ಆರೋಗ್ಯ ತಪಾಸಣೆ ಮತ್ತು ಬಂಜೆತನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವಾಸವಿಟ್ಟು ಬರುವ ನಿಮ್ಮೆಲ್ಲರ ನಿರಂತರ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ. ಉಜಿರೆ ಎಸ್.ಡಿ.ಎಂ ಅಸ್ಪತ್ರೆಯು ಹಲವಾರು ಶಿಬಿರಗಳನ್ನು ಆಯೋಜಿಸುವ ಮೂಲಕ ಜನರ ಆರೋಗ್ಯ ಸಮಸ್ಯೆಗೆ ಸ್ಪಂಧಿಸುತ್ತಿದೆ. ಎಲ್ಲರೂ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಶಿಬಿರರಾರ್ಥಿಗಳಿಗೆ ಶುಭ ಹಾರೈಸಿದರು. ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಹಾಗೂ ಡಾ| ಪ್ರಿಯಾಂಕ ಹಾಗೂ ಬಂಜೆತನ ಚಿಕಿತ್ಸಾ ತಜ್ಞರಾದ ಡಾ| ಗೌರವ್ ಸಿ. ಗುಜರಾತಿ ಶಿಬಿರದಲ್ಲಿ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ, ಚಿಕಿತ್ಸೆ ನೀಡಿದರು. ಜಗನ್ನಾಥ ಎಂ. ಕಾರ್ಯಕ್ರಮ ನಿರೂಪಿಸಿದರು. 164 ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.
Medical Camps
Related News