Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್. ಡಿ.ಎಂ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿನಂತೆ ಜೀವವನ್ನು ಉಳಿಸುವುದಕ್ಕೆ ಪ್ರಯತ್ನಿಸುವ ವೈದ್ಯ ವೃತ್ತಿ ಶ್ರೇಷ್ಟವಾದ್ದು, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಉಜಿರ, ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಅನುಭವಿ ಮತ್ತು ತಜ್ಞ ವೈದ್ಯರ ತಂಡ ಅನಾರೋಗ್ಯ ಪೀಡಿತರಿಗೆ ನಿರಂತರ ಉತ್ತಮ ವೈದ್ಯಕೀಯ ಸೇವೆ ನೀಡುವ ಮೂಲಕ ವೈದ್ಯರೇ ದೇವರು ಎಂಬ ಮಾತನ್ನು ಸಾಬೀತು ಪಡಿಸುತ್ತಿದ್ದಾರೆ. ಎಂದು ಉಜಿರೆ ಎಸ್ ಡಿ ಎಂ ಆಸ್ಪತ್ರೆಯ ನಿರ್ದೇಶರ ಎಂ. ಜನಾರ್ದನ್ ಹೇಳಿದರು.

ಜು.1 ರಂದು ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ವೈದ್ಯರ ದಿನಾಚರಣೆಯಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತಾನಾಡುತ್ತಾ, ಇಲ್ಲಿನ ವೈದ್ಯರ ಸಹಕಾರ, ಸುಧಾರಿತ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳೊಂದಿಗೆ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರಲು ದುಡಿಯುತ್ತಿರುವ ನಮ್ಮೆಲ್ಲ ವೈದ್ಯರ ಸೇವೆ ಶ್ಲಾಘನೀಯ ಎಂದರು.

ವೈದ್ಯರ ದಿನಾಚರಣೆಯ ಪ್ರಯುಕ್ತ ಇಲ್ಲಿನ ವೈದ್ಯರುಗಳನ್ನು ಶಾಲು ಹೊದಿಸಿ, ಹೊಗುಚ್ಚ ನೀಡಿ ಗೌರವಿಸಲಾಯಿತು. ಹಿರಿಯ ವೈದ್ಯ ಡಾ| ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಕು| ನೇತ್ರಾ ಪ್ರಾರ್ಥಸಿ, ಡಾ| ಜ್ಯೋತಿಸ್ ಮರಿಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

News and Events

Related News