Medical Camps
ಪೆರ್ಲ ಶಾಲೆಯಲ್ಲಿ ಉಜಿರೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿಬಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ಅರಸಿನಮಕ್ಕಿ ಇವರ ಸಹಕಾರದೊಂದಿಗೆ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಪೆರ್ಲ ಶಾಲಾ ಆವರಣದಲ್ಲಿ ಆ.25ರಂದು ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಎಸ್ ಡಿ ಎಂ ಆಸ್ಪತ್ರೆಯ ವ್ಯವಸ್ಥಾಪಕ, ನಿರ್ದೇಶಕ ಎಂ ಜನಾರ್ದನರವರು ನೇರವೇರಿಸಿದರು. ಒಕ್ಕೂಟದ ಅಧ್ಯಕ್ಷ ಅಣ್ಣುಗೌಡ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹತ್ಯಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ತಾಲೂಕು ಜನಜಾಗೃತಿ ಸದಸ್ಯರಾದ ಎಚ್, ಎಸ್ ಚೆನ್ನಪ್ಪ ಗೌಡ, ಶಿಬಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನ, ಸ.ಉ.ಹಿ.ಪ್ರಾ. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. 366 ಮಂದಿ ಈ ಶಿಬಿರದ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮವನ್ನು ಸೇವಾಪ್ರತಿನಿಧಿ ಅರುಣಾ ಸ್ವಾಗತಿಸಿ, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಮತ ನಿರೂಪಿಸಿ, ವಲಯ ಮೇಲ್ವಿಚಾರಕಿ ಶಶಿಕಲಾ ಧನ್ಯವಾದ ಮಾಡಿದರು.
Medical Camps
Related News