About us
Achievements
ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಸ್ಪತ್ರೆ ವಿಭಾಗದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಜಿಲ್ಲಾ ಪರಿಸರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿ.ವಿ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಆ.8ರಂದು ಆಯೋಜಿಸಲಾದ ಪ್ರಕೃತಿ ಸಂರಕ್ಷಣಾ ದಿನಾಚರಣೆ ಹಾಗೂ ಜಿಲ್ಲಾ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಕಾರ್ಯನಿರ್ವಾಹಣಾಧಿಕಾರಿ ಮನ್ಮಥ್ ಕುಮಾರ್ ಎನ್ ಪ್ರಶಸ್ತಿ ಸ್ವೀಕರಿಸಿದರು.
ಎಸ್.ಡಿ.ಎಂ ಆಸ್ಪತ್ರೆಯ ಶ್ರೀಮತಿ ಹೇಮಾವತಿ ಇವರಿಗೆ ಸನ್ಮಾನ

ಉಜಿರೆಯ ಎಸ್.ಡಿ.ಎಂ ಆಸ್ಪತ್ರೆ ಎಂ.ಆರ್.ಡಿ ವಿಭಾಗದ ಸಿಬ್ಬಂದಿ ಶ್ರೀಮತಿ ಹೇಮಾವತಿ ಇವರು ಕ್ಷಯರೋಗ ನಿಯಂತ್ರಣಾ ಮಂಡಳಿಗೆ ಸಕಾಲಕ್ಕೆ ಕ್ಷಯರೋಗಿಗಳ ವರದಿ ನೀಡುವ ಮೂಲಕ ಸರಕಾರದ ಕ್ಷಯರೋಗ ನಿಯಂತ್ರಣಾ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ನೀಡಿರುವುದನ್ನು ಗುರುತಿಸಿ ಮಾ. 23ರಂದು ಬಂಟ್ವಾಳದ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್, ಧರ್ಮಸ್ಥಳ ಸಂಯುಕ್ತ ಆಶ್ರಯದಲ್ಲಿ ಆಯೋಜಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು.
ಎಸ್.ಡಿ.ಎಂ ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶ್ರೀ ಶಿಶುಪಾಲ್ ಪೂವಣಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.