News and Events
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
ಜು.1, 2023 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಇಲ್ಲಿನ ಎಲ್ಲಾ ವೈದ್ಯರುಗಳನ್ನು ಶಾಲು ಹೊದಿಸಿ, ಹೂಗುಚ್ಚ ನೀಡಿ ಗೌರವಿಸಲಾಯಿತು.
ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ವೈದ್ಯರಿಗೆ ಶುಭಾಶಯ ಕೋರಿ ಮಾನಾಡುತ್ತಾ, 13 ಮಂದಿ ತಜ್ಞ ವೈದ್ಯರು, 14 ಮಂದಿ ಸಹಾಯಕ ವೈದ್ಯರು, 16 ಮಂದಿ ಸಂದರ್ಶನ ವೈದ್ಯರ ತಂಡದೊಂದಿಗೆ ಈ ಆಸ್ಪತ್ರೆಯಲ್ಲಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಹಾಗೂ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಅತ್ಯುತ್ತಮ ವೈದ್ಯಕೀಯ ಸೇವೆ ನೀಡಲಾಗುತ್ತಿದೆ. ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆಯಿಂದ ದುಡಿಯುತ್ತಿರುವ ಇಲ್ಲಿನ ವೈದ್ಯರ ಸಹಕಾರದಿಂದ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಹಕಾರಿಯಾಗುತ್ತಿದೆ. ಅಂತರಾಷ್ಟ್ರೀಯ ತರಬೇತುದಾರರಿಂದ ಈ ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಈ ಆಸ್ಪತ್ರೆಯ ಎಲ್ಲಾ ವೈದ್ಯರ ಸೇವೆ ಶ್ಲಾಘನೀಯ. ಶೀಘ್ರದಲ್ಲಿ ಈ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಮಗುವಿನ ವಿಶೇಷ ಆರೈಕೆಗಾಗಿ ಮದರ್ ಆ್ಯಂಡ್ ಚೈಲ್ಡ್ ಕೇರ್ ಸೆಂಟರ್ ಪ್ರಾರಂಭಗೊಳ್ಳಲಿದೆ ಎಂದರು.
ಸೌಮ್ಯ, ಮಮತಾ, ಸುಮಂಗಲಾ, ಶ್ರದ್ಧಾ, ಅಂಜು ಪ್ರಕಾಶ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಹಿರಿಯ ವೈದ್ಯರಾದ ಡಾ| ಬಾಲಕೃಷ್ಣ ಭಟ್, ಡಾ| ಕಮಲಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಸ್ಪತ್ರೆಯ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.