Contact Mobile: 91 77603 97878, Land: 08256-295611/ 615/616

News and Events

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಫೆ.21 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹೈಟೆಕ್ ಆಸ್ಪತ್ರೆಯನ್ನು ತೆರೆದು ವೈದ್ಯಕೀಯ ಸೇವೆ ನೀಡುತ್ತಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದ ತಿಳಿಸಿದ ಅವರು ಇಲ್ಲಿರುವ ಸುಸಜ್ಜಿತ ವ್ಯವಸ್ಥೆ ಮತ್ತು ವೈದ್ಯಕೀಯ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಪಿ.ಸಿ.ಸಿ ಶ್ರೀಮತಿ ಹೇಮಾವತಿ ಐ, ಸಂಪರ್ಕಾಧಿಕಾರಿ ಚಿದಾನಂದ ಡಿ. ಆರ್, ಸೂಪರ್ವೈಸರ್ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

News and Events

Related News