News and Events
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಾ. 22 ರಂದು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಮಾನ್ಯ ಡಾ. ಭಗವಾನ್ ಬಿ.ಸಿ ಭೇಟಿ ನೀಡಿದರು.
ಬಳಿಕ ಆಸ್ಪತ್ರೆಯ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂಜ್ಯರ ಎಲ್ಲಾ ಸಂಸ್ಥೆಗಳು ಅತ್ಯಂತ ಉತ್ತಮ ರೀತಿಯಲ್ಲಿ ನಡೆಸಲ್ಪಡುತ್ತಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗಳು, ಇಲ್ಲಿನ ಶುಚಿತ್ವ ಬಹಳ ಉತ್ತಮವಾಗಿದೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತಿರುವ ಆಸ್ಪತ್ರೆಯ ನಿರಂತರ ಬೆಳವಣಿಗೆ, ಶ್ರೇಷ್ಠತೆ ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಗಮನಿಸಿದರೆ ಈ ಆಸ್ಪತ್ರೆಯು ನರ್ಸಿಂಗ್ ಕಾಲೇಜು ಮತ್ತು ಮೆಡಿಕಲ್ ಕಾಲೇಜು ಪ್ರಾರಂಭಿಸಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.














