News and Events
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮಕ್ಕಳ ತಜ್ಞರಾದ ಡಾ| ಪ್ರತಿತ್, ಡಾ| ಅರ್ಚನಾ, ಡಾ| ನಿಖಿತಾ ಮಿರ್ಲೆ, ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಹಾಗೂ ಇತರ ವೈದ್ಯರು, ದಾದಿಯರು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.




