News and Events
ಎಸ್.ಡಿ.ಎಂ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗಳ ದಿನ
ಅಕ್ಟೋಬರ್ 2 ಗಾಂಧಿ ಜಯಂತಿಯಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸ್ವಚ್ಚತಾ ವಿಭಾಗದ ಸಿಬ್ಬಂದಿಗಳ ದಿನವನ್ನಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರನ್ನು ಹಾಗೂ ಹಿರಿಯ ಸ್ವಚ್ಚತಾ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಇದರೊಂದಿಗೆ ವಿವಿಧ ಮನೋರಂಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆಸ್ಪತ್ರೆಯ ನಿರ್ದೇಶಕರಾದ ಎಂ. ಜನಾರ್ದನ್, ಆಸ್ಪತೆಯ ವೈದ್ಯಕೀಯ ಅಧೀಕ್ಷಕರಾದ ಡಾ| ರಂಜನ್ ಕುಮಾರ್ ಉಪಸ್ಥಿತರಿದ್ದರು.



