News and Events
ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ತರಬೇತಿ ಕಾರ್ಯಾಗಾರ
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಬೆಳ್ತಂಗಡಿ ಅಗ್ನಿಶಾಮಕ ದಳದವರಿಂದ ಏ. 19ರಂದು ಅಗ್ನಿ ಶಮನ ಕಾರ್ಯಾಗಾರವು ನಡೆಯಿತು. ಅಗ್ನಿ ದುರಂತ ಸಂಭವಿಸಿದಾಗ ಪಾಲಿಸಬೇಕಾದ ಎಚ್ಚರಿಕೆ, ಅಗ್ನಿಯ ವಿಧಗಳು ಅವುಗಳನ್ನು ಆರಿಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಉಸ್ಮಾನ್ ವಿವರಿಸಿದರು.
ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ನಿರ್ದೇಶನದಂತೆ ಮೂವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಅಗ್ನಿಶಮನ ವ್ಯವಸ್ಥೆಯನ್ನು ಅಳವಡಿಸಿದ್ದು, ಇದಕ್ಕಾಗಿ ತರಬೇತಿ ಪಡೆದಿರುವ ಸಿಬ್ಬಂದಿಯನ್ನು ನೇಮಿಸಲಾಗಿದೆ. ಆಸ್ಪತ್ರೆ ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿ ಸೂಚಿಸಿರುವ ಎಲ್ಲಾ ಭದ್ರತಾ ವ್ಯವಸ್ಥೆಯನ್ನು ಈ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಎಂದು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು.
ಆಸ್ಪತ್ರೆಯು ವಿಶಾಲವಾಗಿದ್ದು, ಗಾಳಿ ಬೆಳಕು ಹೊಂದಿದೆ. ಆದರೂ ರೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಅತ್ಯಾಧುನಿಕ ಅಗ್ನಿಶಾಮಕ ವ್ಯವಸ್ಥೆಯನ್ನು ಅಳವಡಿಸಿದ್ದು, ಆಸ್ಪತ್ರೆಯಲ್ಲಿ ಇರುವ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳ್ತಂಗಡಿ ಅಗ್ನಿಶಾಮಕ ಠಾಣಾಧಿಕಾರಿ ಎಂ. ಗೋಪಾಲ್, ಉಜಿರೆ ಎಸ್. ಡಿ ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ರಂಜನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಗನ್ನಾಥ ಎಂ ಕಾರ್ಯಕ್ರಮ ನಿರೂಪಿಸಿದರು. ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.